Headlines
Loading...
Post Office Recruitment 2024: ತಿಂಗಳಿಗೆ 63,000 ಸಂಬಳ- 8ನೇ ಕ್ಲಾಸ್ ಪಾಸಾಗಿದ್ರೆ ನಾಳೆಯೊಳಗೆ ಅಪ್ಲೈ ಮಾಡಿ

Post Office Recruitment 2024: ತಿಂಗಳಿಗೆ 63,000 ಸಂಬಳ- 8ನೇ ಕ್ಲಾಸ್ ಪಾಸಾಗಿದ್ರೆ ನಾಳೆಯೊಳಗೆ ಅಪ್ಲೈ ಮಾಡಿ



ಜನವರಿ 10, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು.

Post Office Recruitment 2024: ಭಾರತೀಯ ಅಂಚೆ ಇಲಾಖೆ(India Postal Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಮೋಟಾರ್ ವೆಹಿಕಲ್ ಮೆಕ್ಯಾನಿಕ್ (ಸ್ಕಿಲ್ಡ್​ ಆರ್ಟಿಸನ್ ಗ್ರೇಡ್-3) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 10, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 8ನೇ ತರಗತಿ ಪಾಸಾಗಿರಬೇಕು.

ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 1, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ

ಅರ್ಜಿ ಶುಲ್ಕದ ವಿವರಗಳು:
ಪರೀಕ್ಷಾ ಶುಲ್ಕ:
SC/ST/ಮಹಿಳಾ ಅಭ್ಯರ್ಥಿಗಳು: Nil
ಎಲ್ಲಾ ಇತರ ಅಭ್ಯರ್ಥಿಗಳು: ರೂ.400/-
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು: ರೂ.100/-
ಪಾವತಿ ವಿಧಾನ: ಭಾರತೀಯ ಪೋಸ್ಟಲ್ ಆರ್ಡರ್

ವೇತನ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹19,900-63,200 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಛತ್ತೀಸ್​ಗಢದ ದರ್ಗ್​ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಸ್ಪರ್ಧಾತ್ಮಕ ಟ್ರೇಡ್ ಟೆಸ್ಟ್​
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನಾಳೆಯೊಳಗೆ ಕಳುಹಿಸಬೇಕು.

ಮ್ಯಾನೇಜರ್ (ಗ್ರೂಪ್​-A)
ಮೇಲ್ ಮೋಟಾರ್ ಸೇವೆಗಳು
GPO ಕಾಂಪೌಂಡ್
ಸುಲ್ತಾನಿಯಾ ರಸ್ತೆ
ಭೋಪಾಲ್-462001

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/12/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 10, 2024(ನಾಳೆ)

0 Comments: